5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಅಯೋಮಯ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ವಿಭಾಗೀಯ ಪೀಠ

ಸಮಗ್ರ ನ್ಯೂಸ್: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿತ್ತು.

Ad Widget ... ..

ಈ ಹಿಂದೆ ಹೈಕೋರ್ಟ್‌ ಏಕ ಸದಸ್ಯ ಪೀಠ ಈ ತರಗತಿಗಳ ಬೋರ್ಡ್‌ ಪರೀಕ್ಷೆಯನ್ನು ರದ್ದು ಪಡಿಸಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಅದಾದ ಬಳಿಕ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠವು, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿತ್ತು.

Ad Widget

ಅದಾದ ಬಳಿಕ 5, 8 ಹಾಗೂ 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು. ಜೊತೆಗೆ ಮೇಲ್ಮನವಿ ವಿಚಾರಣೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

Leave a Comment

Your email address will not be published. Required fields are marked *