Ad Widget .

ಪರಿಸರ ಸ್ನೇಹಿ ಚುನಾವಣೆ/ ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ ಮುಂದಾದ ಆಯೋಗ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯನ್ನು ಪರಿಸರ ಸ್ನೇಹಿಯಾಗಿಸಲು ಚುನಾವಣಾ ಆಯೋಗ ಟೊಂಕಕಟ್ಟಿದ್ದು, ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ, ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಒತ್ತು ನೀಡುವ ಜೊತೆಗೆ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ ಕಡಿವಾಣ, ಕಾರ್ ಪೂಲಿಂಗ್‍ಗೆ ಉತ್ತೇಜನ ಸೇರಿ ಹಲವು ಕ್ರಮಗಳಿಗೆ ಮುಂದಾಗಿದೆ. ಇದರ ಜೊತೆಗೆ, ಪರಿಸರ ಸ್ನೇಹಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳೂ ಸಾಥ್ ನೀಡಬೇಕು ಎಂದೂ ಅವರು ಕೋರಿದ್ದಾರೆ.

Ad Widget . Ad Widget .

ಚುನಾವಣೆಗೆ ಸಂಬಂಧಿಸಿದ ಪ್ರತಿ ಕಾರ್ಯಕ್ರಮಗಳೂ ಆದಷ್ಟು ಪರಿಸರ ಸ್ನೇಹಿಯಾಗಿರಬೇಕು ಎಂಬುದು ಆಯೋಗದ ಉದ್ದೇಶವಾಗಿದೆ. ಚುನಾವಣಾಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ಈ ಕುರಿತು ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ. ಪರಿಸರ ಸ್ನೇಹಿ ಚುನಾವಣೆ ನಡೆಸಲು ಹಲವು ಕ್ರಮಕ್ಕೆ ಮುಂದಾಗಿದ್ದೇವೆ. ತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಬೇಕು. ಕಾಗದದ ಬಳಕೆಯನ್ನು ಆದಷ್ಟೂ ಕಡಿಮೆ ಮಾಡಬೇಕು ಎಂದು ಕೂಡಾ ಸೂಚಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *