Ad Widget .

ಗೋದಾಮಿನಲ್ಲಿ ಅಗ್ನಿ ಅವಘಡ| ಬೆಂಕಿ ನಂದಿಸಲು ನೀರಿಲ್ಲದೆ ಅಗ್ನಿಶಾಮಕ ಸಿಬ್ಬಂದಿ ಪರದಾಟ

ಸಮಗ್ರ ನ್ಯೂಸ್: ಬೆಂಗಳೂರಿನ ಭೈರತಿ ಬಳಿ ಇರುವ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ.

Ad Widget . Ad Widget .

ಇಲ್ಲಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಮತ್ತು 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Ad Widget . Ad Widget .

ಗೋದಾಮಿನಲ್ಲಿ ಡಿ ಮಾರ್ಟ್ ಸೇರಿದಂತೆ ಪ್ರತಿಷ್ಠಿತ ಸೂಪರ್ ಮಾರ್ಕೆಟ್​ಗಳಿಗೆ ಸಾಗಿಸುವ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದ್ದತ್ತು. ಇದೆಲ್ಲವೂ ಬೆಂಕಿಗಾಹುತಿಯಾಗಿದೆ. ಬೆಳಗ್ಗೆ 4.30 ರಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಆದ್ರೆ ಬೆಂಗಳೂರಿನಲ್ಲಿ ನೀರಿನ ಅಭಾವದಿಂದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

Leave a Comment

Your email address will not be published. Required fields are marked *