Ad Widget .

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ – ಲಾರಿ ಢಿಕ್ಕಿ

ಸಮಗ್ರ ನ್ಯೂಸ್ : ಬಿ.ಸಿ.ರೋಡಿನ ಕೈಕಂಬದಲ್ಲಿ ಇತ್ತೀಚೆಗೆ ಕೆಎಸ್ಸಾರ್ಟಿಸಿ ಬಸ್ ಹಾಗೂ ಲಾರಿ ಢಿಕ್ಕಿ ಹೊಡೆದುಕೊಂಡ ಪರಿಣಾಮ ಬಸ್ ಪ್ರಯಾಣಿಕ ತೆಲಂಗಾಣದ ಸಿಕಂದರ್‌ಬಾದ್ ಮಲ್ಕಜ್‌ಗಿರಿ ನಿವಾಸಿ ಆರ್. ದೇದೀಪ್ ಶರ್ಮಾ ಗಾಯಗೊಂಡಿದ್ದು, ಅವರನ್ನು ಬಿ.ಸಿ. ರೋಡ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಬಸ್ಸನ್ನು ಚಾಲಕ ಅಂಬರೀಷ್ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಹೋಗಿ ಕೈಕಂಬದಲ್ಲಿ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ನೀಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *