Ad Widget .

ಮಲೆನಾಡಿನಲ್ಲಿಂದು ಮೋದಿ ಅಬ್ಭರ| ಶಿವಮೊಗ್ಗದಲ್ಲಿ ಕೇಸರಿ ರಣಕಹಳೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಇಂದು(ಮಾ18) ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತವರು ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Ad Widget . Ad Widget .

ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಬಳಿಕ ರಾಜ್ಯದಲ್ಲಿ ಮೋದಿಯವರ ಮೊದಲ ಪ್ರಚಾರ ಸಭೆ ಇದಾಗಿದೆ. ಶನಿವಾರದ ಕಲಬುರಗಿ ಸಮಾವೇಶದ ಬೆನ್ನಹಿಂದೆಯೇ ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬಿಜೆಪಿ ಪ್ರಚಾರಕ್ಕೆ ಭರ್ಜರಿ ಚಾಲನೆ ನೀಡಲಿದ್ದಾರೆ.

Ad Widget . Ad Widget .

ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಧ್ಯಾಹ್ನ 1.15ಕ್ಕೆ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕಾಗಿ ಬಿಜೆಪಿ ಧ್ವಜದ (ಕೇಸರಿ) ಬಣ್ಣದ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ವೇದಿಕೆಯ ಎರಡೂ ಬದಿಯಲ್ಲಿ ಮೆಟಲ್‌ ಡಿಟೆಕ್ಟರ್‌ ಅಳವಡಿಸಲಾಗಿದ್ದು, ವೇದಿಕೆ ಹಿಂಭಾಗ ಮತ್ತು ಅಕ್ಕಪಕ್ಕದಲ್ಲಿ ತಾತ್ಕಾಲಿಕ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ವೇದಿಕೆ ಮುಂಭಾಗ ಬೃಹತ್‌ ಪೆಂಡಾಲ್‌ ಹಾಕಲಾಗಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಕುರ್ಚಿಗಳನ್ನು ಹಾಕಲಾಗಿದೆ. ಸಮಾವೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. 5 ಲೋಕಸಭಾ ಕ್ಷೇತ್ರಗಳ ಸಂಸದರು, ಶಾಸಕರು, ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

Leave a Comment

Your email address will not be published. Required fields are marked *