Ad Widget .

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ/ ವರದಿ ಕೇಳಿದ ಸರ್ಕಾರ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಪೆÇೀಷಕ ವಲಯದಲ್ಲಿ ಭಾರೀ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್) ಆರಂಭಿಸಲು ಮುಂದಾಗಿದ್ದು, ಈ ಸಂಬಂಧ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಾನುಸಾರ ಮೂಲಸೌಲಭ್ಯ, ತರಗತಿ ಕೊಠಡಿಗಳು ಮತ್ತು ಬೋಧಕ ವರ್ಗದ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಿದೆ. ಮೊದಲ ಹಂತದಲ್ಲಿ 2000 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಆಯವ್ಯಯದಲ್ಲಿ ಘೋಷಿಸಿದ್ದಾರೆ.

Ad Widget . Ad Widget .

ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರು ಆದ್ಯತೆವಾರು ಶಾಲೆಗಳ ಪಟ್ಟಿಯೊಂದಿಗೆ ವರದಿಯನ್ನು ಆಯಾ ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ. ಡಿಡಿಪಿಐಗಳಿಂದ ಬಂದ ವರದಿಗಳನ್ನು ಪರಿಶೀಲಿಸಿ ಪ್ರಾದೇಶಿಕ ಆಯುಕ್ತರು ದ್ವಿಭಾಷಾ ಮಾಧ್ಯಮ ಆರಂಭದ ಬಗ್ಗೆ ತಮ್ಮ ಅಭಿಪ್ರಾಯದೊಂದಿಗೆ ಶಿಫಾರಸುಗಳನ್ನು ಸಲ್ಲಿಸಬೇಕು. ನಂತರ ಇಲಾಖೆಯು ಸಮಗ್ರ ಪರಿಶೀಲನೆ ನಡೆಸಿ ಅಗತ್ಯ ಅಭಿಪ್ರಾಯ ಕ್ರೋಢೀಕರಿಸಿ ಸರ್ಕಾರಕ್ಕೆ ಆದೇಶ ನೀಡುವಂತೆ ಕೋರಿಕೆ ಸಲ್ಲಿಸಲಿದೆ ಎಂದು ಹೇಳಿದ್ದಾರೆ.

Ad Widget . Ad Widget .

ಈಗಾಗಲೇ ಇಂಗ್ಲಿಷ್ ಮಾಧ್ಯಮದಲ್ಲೂ ಬೋಧನೆ ನಡೆಸುತ್ತಿರುವ ರಾಜ್ಯದ 260ಕ್ಕೂ ಹೆಚ್ಚು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (ಕೆಪಿಎಸ್) ಎಲ್‍ಕೆಜಿ ಮತ್ತು 1ನೇ ತರಗತಿಗಳಿಗೆ ಮಕ್ಕಳ ದಾಖಲಾತಿ ಸಂಖ್ಯೆ ವ್ಯಾಪಕವಾಗಿ ಹೆಚ್ಚಳವಾಗಿರುವುದರಿಂದ ಆ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮಕ್ಕೆ ಹೆಚ್ಚುವರಿ ವಿಭಾಗ ಆರಂಭಿಸಲು, ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 6, 7, 8ನೇ ತರಗತಿ, 9, 10ನೇ ತರಗತಿ ಆರಂಭಿಸಿ ಉನ್ನತೀಕರಿಸಲು ಕೂಡ ಸರ್ಕಾರ ಚಿಂತನೆ ನಡೆಸಿದೆ.

Leave a Comment

Your email address will not be published. Required fields are marked *