ದ.ಕ – ಕೊಡಗು ಗಡಿಭಾಗದಲ್ಲಿ ನಕ್ಸಲ್ ಶಂಕೆ ಹಿನ್ನಲೆ| ಕೂಂಬಿಂಗ್ ಆರಂಭಿಸಿದ ಎಎನ್ಎಫ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಕೊಡಗು ಗಡಿ ಪ್ರದೇಶವಾದ ಕೂಜಿಮಲೆ ಭಾಗದಲ್ಲಿ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಶಂಕೆಯ ಹಿನ್ನಲೆಯಲ್ಲಿ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ‌.

Ad Widget ... ..

ಕಾರ್ಕಳದಿಂದ ಆಗಮಿಸಿದ ಎಎನ್ಎಫ್ ತಂಡ ಕೂಜಿಮಲೆ ಸಮೀಪದ ಮೂರು ಕಡೆಗಳಾದ ಬಾಳುಗೋಡಿನ ಉಪ್ಪುಕಳ, ಕೂಜಿಮಲೆ, ಕಡಮಕಲ್ಲು ಪ್ರದೇಶಕ್ಕೆ ತೆರಳಿ ಕೂಂಬಿಂಗ್ ನಡೆಸಲು ತಯಾರಿ ನಡೆಸಿದ್ದಾರೆ. ಕೂಜಿಮಲೆಯಿಂದ ಎಎನ್ಎಫ್ ತಂಡ ಕೂಂಬಿಂಗ್ ಆರಂಭಿಸಿದರು.

Ad Widget

ಕೂಜಿಮಲೆಯ ಅಂಗಡಿಯೊಂದರಿಂದ ತಂಡ ಭೇಟಿ ನೀಡಿ ದಿನಸಿ ಸಾಮಗ್ರಿ ಪಡೆದುಕೊಂಡಿದ್ದು, ನಕ್ಸಲರೆಂಬ ಶಂಕೆ ಹಿನ್ನೆಲೆಯಲ್ಲಿ ಎಎನ್ಎಫ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶಂಕಿತ ನಕ್ಸಲರ ತಂಡದಲ್ಲಿ ಆರು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಸೇರಿ 8 ಮಂದಿ ಇದ್ದರು ಎನ್ನಲಾಗುದ್ದು, ಸಶಸ್ತ್ರಧಾರಿಗಳಾಗಿದ್ದರು ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *