Ad Widget .

ಕಮಲ್‍ನಾಥ್‍ಗೆ ಶಾಕ್ ಕೊಟ್ಟ ಬೆಂಬಲಿಗರು/ ಆಪ್ತ ಸಹಾಯಕ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಕಮಲನಾಥ್ ಅವರ ಆಪ್ತ ಸಹಾಯಕ ಸೇರಿದಂತೆ ಹಲವು ಕಾರ್ಯಕರ್ತರು ಇಂದು ಭೋಪಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಕಾಂಗ್ರೆಸ್ ವಕ್ತಾರ ಸೈಯದ್ ಜಾಫರ್ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿ.ಡಿ. ಶರ್ಮಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ.

Ad Widget . Ad Widget .

ಛಿಂದ್ವಾರಾ ಮೂಲದ ಜಾಫರ್ ಅವರನ್ನು ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ಆಪ್ತ ಸಹಾಯಕ ಎಂದೇ ಪರಿಗಣಿಸಲಾಗಿತ್ತು. ಕಮಲನಾಥ್ ಮತ್ತು ಸಂಸದರಾದ ಅವರ ಪುತ್ರ ನಕುಲ್‍ನಾಥ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೆÇೀಹಗಳು ಇತ್ತೀಚೆಗಷ್ಟೇ ಹರಿದಾಡಿದ್ದವು. ಆದರೆ, ಈ ಕುರಿತು ಸ್ಪಷ್ಟನೆ ನೀಡಿದ್ದ ಕಮಲನಾಥ್ ಅವರು ಬಿಜೆಪಿಗೆ ಸೇರುತ್ತೇನೆ ಎಂಬ ವದಂತಿಗಳನ್ನು ಸೃಷ್ಟಿಸಿದ್ದು ನೀವೇ (ಮಾಧ್ಯಮಗಳು) ಹೊರತು ನಾನು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ಕಿಡಿಕಾರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *