ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ರಾಜಕೀಯ ಪಕ್ಷಗಳಿಂದ ಪ್ರಚಾರಗಳು ನಡೆಯುತ್ತಿದೆ. ಆದರೆ ಈಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ. ಇದೀಗ ಕಾಂಗ್ರೆಸ್ ನ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ದೆಹಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾಲೋಚನಾ ಸಭೆಗಳು ನಡೆಯುತ್ತಿದ್ದು, ಅದರಲ್ಲಿ ಭಾಗವಹಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಲಿದ್ದಾರೆ.
ಲೋಕಸಭೆ ಟಿಕೆಟ್ ಗೊಂದಲ|ಇಂದು ದೆಹಲಿಗೆ ಸಿದ್ದರಾಮಯ್ಯ
