ಸಮಗ್ರ ಉದ್ಯೋಗ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಾರವಾರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವಿದ್ಯಾರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್/ ಕಮ್ಯುನಿಕೇಶನ್/ ಟೆಲಿ-ಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ /ಕಮ್ಯುನಿಕೇಶನ್/ಟೆಲಿಕಮ್ಯುನಿಕೇಶನ್/ಎಲೆಕ್ಟ್ರಿಕಲ್ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2024ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ವೇತನ:
ಮಾಸಿಕ ₹ 30,000- 1,20,000
ಉದ್ಯೋಗದ ಸ್ಥಳ:
ವಿಶಾಖಪಟ್ನಂ
ಕಾರವಾರ
ಕೊಚ್ಚಿ
ಗುಹಾವಟಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸಹಾಯಕ ವ್ಯವಸ್ಥಾಪಕ-ಮಾನವ ಸಂಪನ್ಮೂಲಗಳು
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಮಿಲಿಟರಿ ಕಮ್ಯುನಿಕೇಷನ್ & NWCS – SBU
ಜಾಲಹಳ್ಳಿ ಪೋಸ್ಟ್
ಬೆಂಗಳೂರು – 560013