ಸಮಗ್ರ ಉದ್ಯೋಗ: ನವ ಮಂಗಳೂರು ಬಂದರು ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 60,000
ಉದ್ಯೋಗದ ಸ್ಥಳ:
ಮಂಗಳೂರು
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ವೈದ್ಯಾಧಿಕಾರಿ
ನವ ಮಂಗಳೂರು ಬಂದರು ಪ್ರಾಧಿಕಾರ ಆಸ್ಪತ್ರೆ
ಪಣಂಬೂರು ಮಂಗಳೂರು
ಕರ್ನಾಟಕ
ಮಾರ್ಚ್ 20, 2024 ಅಂದರೆ ನಾಳೆ ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು.