Ad Widget .

ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಹಲ್ಲೆ

ಸಮಗ್ರ ನ್ಯೂಸ್: ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Ad Widget . Ad Widget .

ನಗರತ್​ಪೇಟೆಯಲ್ಲಿರುವ ಮೊಬೈಲ್ ಶಾಪ್​ನಲ್ಲಿ ಯುವಕ ಹುನುಮಾನ್​ ಚಾಲಿಸಾ ಅನ್ನು ಜೋರು ಸೌಂಡ್​ ಇಟ್ಟು ಹಚ್ಚಿದ್ದರು. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದಿದ್ದರು. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್​ ಅವರ ಕೊರಳ ಪಟ್ಟಿ ಹಿಡಿದು, ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ಮಾಡಿದ್ದರು. ಈ ಗ್ಯಾಂಗ್​ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Ad Widget . Ad Widget .

ಆರೋಪಿಗಳನ್ನು ನಿನ್ನೆ ರಾತ್ರಿ ಹಲಸೂರುಗೇಟ್ ಪೊಲೀಸರು ವಶಕ್ಕೆ ಪಡೆದರು, ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಐವರು ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ಐವರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಇನ್ನು ಗಾಯಗೊಂಡ ಮುಖೇಶ್​ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ​ದೂರು ದಾಖಲಿಸಿದ್ದರು. ಯುವಕನ ದೂರಿನನ್ವಯ, ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಐವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

Leave a Comment

Your email address will not be published. Required fields are marked *