Ad Widget .

ಮಂಡ್ಯ ಕಣಕ್ಕಿಳಿಯಲು ಎಚ್.ಡಿ ಕುಮಾರಸ್ವಾಮಿ ನಿರ್ಧಾರ..!

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ಎಲ್ಲಾ ಪಕ್ಷದಲ್ಲಿ ದೊಡ್ಡ ತಲೆಬಿಸಿಯಾಗಿರುವಂತಹದು, ಇದರಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದೇ ಸದ್ಯ ಬಹಳಷ್ಟು ಕುತೂಹಲ. ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ವದಂತಿಗಳ ಮಧ್ಯೆ, ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಟಿಕೆಟ್​ಗೆ ಪೈಪೋಟಿ ನಡೆಸುತ್ತಿದ್ದಾರೆ. ಆದರೆ ಈಗ ವರದಿಗಳ ಪ್ರಕಾರ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಅವರೇ ಮಂಡ್ಯದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಬಂದಿದೆ.

Ad Widget . Ad Widget .

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಬಹುತೇಕ ನಮಗೆ ಎಂಬುದು ಖಚಿತವಾಗಿದೆ ಎಂದು ಈಗಾಗಲೇ ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ. ಸಿಎಸ್ ಪುಟ್ಟರಾಜು ಅವರ ಹೆಸರು ಮಂಡ್ಯ ಕ್ಷೇತ್ರಕ್ಕೆ ಹಿಂದೆ ಹಲವು ಬಾರಿ ಕೇಳಿಬಂದಿದೆ. ಆದರೆ ಇದೀಗ, ಕೊನೆ ಕ್ಷಣದಲ್ಲಿ ಕುಮಾರಸ್ವಾಮಿಯೇ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *