ದೇವರಮನೆಯಲ್ಲಿ ಕಾಡಾನೆ ದಾಳಿ|ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ ಸಮೀಪದ ದೇವರಮನೆಯಲ್ಲಿ ಕಾಡಾನೆಯೊಂದು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾದ ಘಟನೆ ಸೋಮವಾರ ಸಂಜೆ ನಡೆದಿದೆ.

. Ad Widget . Ad Widget . Ad Widget .

ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವರಮನೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ ದೇವರಮನೆ ರಸ್ತೆಯಲ್ಲಿ ಕಾಡಾನೆ ಬೈಕಿಗೆ ಅಡ್ಡ ಬಂದು ಅಟ್ಟಿಸಿಕೊಂಡು ಬಂದಿದೆ. ತಕ್ಷಣ ಬೈಕ್ ಸವಾರರು ಓಡಿ ಹೋಗಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಬೈಕ್ ಜಖಂಗೊಂಡಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳಾದ ಅಭಿಜಿತ್, ಬಣಕಲ್ ಠಾಣಾ ಪಿಎಸ್‌ಐ ಎನ್.ಕೆ.ಓಮನಾ, ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *