ಸಮಗ್ರ ನ್ಯೂಸ್: ಬೆಂಗಳೂರಿನ ನಗರತ್ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಇಂದು ನಗರದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದು, ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಸಾವಿರಾರು ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಕೂಡ ಭಾಗಿಯಾಗಿದ್ದರು.
ಈ ವೇಳೆ ತಳ್ಳಾಟ, ನೂಕಾಟ ನಡೆದಿದ್ದು, ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.
ನೀತಿ ಸಂಹಿತೆ ಜಾರಿಯಾಗಿದೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಎಂದು ಪೊಲೀಸರು ಹೇಳಿದರು. ಇದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು, ತೇಜಸ್ವಿ ಸೂರ್ಯ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದರು.