Ad Widget .

ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಸಾವು| ಶಿಕ್ಷಕರು ಸಸ್ಪೆಂಡ್

ಸಮಗ್ರ ನ್ಯೂಸ್: ಶಾಲೆಯ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ ವಿದ್ಯಾರ್ಥಿನಿಯ ಬಟ್ಟೆಗೆ ಬೆಂಕಿ ತಗುಲಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಮೇಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಮೃತಪಟ್ಟ ಬಾಲಕಿಯಾಗಿದ್ದಾಳೆ.

Ad Widget . Ad Widget .

ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದ ವೇಳೆ ಆಕೆ ಶಾಲೆಯ ಪಕ್ಕದಲ್ಲೇ ಇರುವ ದೇವಾಲಯದಲ್ಲಿ ದೀಪ ಹಚ್ಚಲು ಹೋಗಿದ್ದಳು. ತನ್ನ ಜತೆಗೆ ತರಗತಿಯ ಇತರ ಕೆಲವು ಮಕ್ಕಳನ್ನು ಕೂಡಾ ಆಕೆ ಕರೆದುಕೊಂಡು ಹೋಗಿದ್ದಳು. ‌ಆದರೆ ಅಲ್ಲಿ ಏನಾಯ್ತೊ ಗೊತ್ತಿಲ್ಲ ದೀಪ ಹಚ್ಚೊ ಬರದಲ್ಲಿ ಆಕೆಯ ಬಟ್ಟೆಗೆ ಬೆಂಕಿ ಹತ್ತಿಕೊಂಡಿತ್ತು. ಬೆಂಕಿ ಬಟ್ಟೆಗೆ ತಗುಲಿ ಮೈಗೆ ಸುಟ್ಟ ಗಾಯಗಳಾಗಿತ್ತು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

Ad Widget . Ad Widget .

ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಯ ವರೆಗೆ ಸುಮಾರು 75 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ಪಾಠ ಮಾಡಲು ನಾಲ್ಕು ಜನ ಶಿಕ್ಷಕರಿದ್ದಾರೆ. ಆದರೆ ಮಕ್ಕಳ ಮೇಲೆ ನಿಗಾ ಇಡದೆ ಇರುವುದು ತಪ್ಪು ಎಂಬ ನೆಲೆಯಲ್ಲಿ ಎಲ್ಲ ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

Leave a Comment

Your email address will not be published. Required fields are marked *