Ad Widget .

ಬಂಟ್ವಾಳ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ

ಸಮಗ್ರ ನ್ಯೂಸ್ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಜಿಪಮೂಡ ಗ್ರಾಮದ ಬೇಂಕ್ಯ ಎಂಬಲ್ಲಿ ಇತೀಚೆಗೆ ನಡೆದಿದೆ.

Ad Widget . Ad Widget .

ಗಾಯಾಳುಗಳನ್ನು ಬೈಕ್ ಸವಾರ ಜಲಾಲುದ್ದೀನ್, ಸಹಸವಾರ ಅಬ್ದುಲ್ ಸಲಾಂ ಹಾಗೂ ಇನ್ನೊಂದು ಬೈಕ್ ಸವಾರ ಸತ್ತಿವೇಲು ಎಂದು ಗುರುತಿಸಲಾಗಿದೆ.

Ad Widget . Ad Widget .

ನರಿಂಗಾನ ನಿವಾಸಿ ಅಬ್ದುಲ್ ಸಲಾಂ ಹಾಗೂ ಜಲಾಲುದ್ದೀನ್ ಅವರು ತಮ್ಮ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಸಜಿಪಮೂಡ ಗ್ರಾಮದ ಬೇಂಕ್ಯ ಎಂಬಲ್ಲಿ ಸತ್ತಿವೇಲುರವರು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಎರಡೂ ಬೈಕ್ ಸವಾರರು ಕೂಡಾ ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *