ಸಮಗ್ರ ಉದ್ಯೋಗ: ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 64 ಅಸಿಸ್ಟೆಂಟ್ ಎಂಜಿನಿಯರ್, ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಮೊದಲು ಮಾರ್ಚ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಬಳಿ ಆ ದಿನಾಂಕವನ್ನು ಮಾರ್ಚ್ 21 ರವರೆಗೆ ವಿಸ್ತರಿಸಲಾಗಿತ್ತು. ಆ ಪ್ರಕಾರ ನಾಳೆಯೇ ಅಪ್ಲೈ ಮಾಡಲು ಕೊನೆಯ ದಿನವಾಗಿದೆ.
ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 50
ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ (ಗ್ರೂಪ್-ಸಿ)- 14
ವಿದ್ಯಾರ್ಹತೆ:
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಸಿವಿಲ್ನಲ್ಲಿ ಬಿಇ/ಬಿ.ಟೆಕ್
ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ (ಗ್ರೂಪ್-ಸಿ)- ಬಿ.ಕಾಂ
ವಯೋಮಿತಿ:
ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 10, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ:
ಅಂಗವಿಕಲ ಅಭ್ಯರ್ಥಿಗಳು: ಇಲ್ಲ
SC/ST/ಪ್ರವರ್ಗ-I/ಮಾಜಿ ಸೈನಿಕರು/ಮಾನಸಿಕ ವಿಕಲಚೇತನ ಅಭ್ಯರ್ಥಿಗಳು: ರೂ.500/-
ಸಾಮಾನ್ಯ/ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.750/-
ಪಾವತಿ ವಿಧಾನ: ಆನ್ಲೈನ್
ಉದ್ಯೋಗದ ಸ್ಥಳ:
ಕರ್ನಾಟಕ
ವೇತನ:
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಮಾಸಿಕ ₹ 43,100-83,900
ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ (ಗ್ರೂಪ್-ಸಿ)- ಮಾಸಿಕ ₹ 27,650-52,650
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://cetonline.karnataka.gov.in/kea/apply here
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/02/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 21, 2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮಾರ್ಚ್ 22, 2024
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-23460460 ಗೆ ಕರೆ ಮಾಡಿ.