Ad Widget .

ನಮ್ಮ ಮೆಟ್ರೋ ಸಿಬ್ಬಂದಿಯಿಂದ ಅಸಭ್ಯ ವರ್ತನೆ| ಮಹಿಳೆ ಮುಂದೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪ

ಸಮಗ್ರ ನ್ಯೂಸ್: ಬೆಂಗಳೂರಿನ ಮೆಟ್ರೊ ನಿಲ್ದಾಣದಲ್ಲಿ ಪ್ರತಿ ಭಾರಿಯು ಅಸಭ್ಯ ವರ್ತನೆಗಳು ಸುದ್ದಿಯಲ್ಲಿರುತ್ತದೆ. ಇಂದು ಇಂತಹದೆ ಸುದ್ದಿ ಮತ್ತೆ ಕೇಳಿಬರುತ್ತಿದೆ. ಮಹಿಳೆ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ನಮ್ಮ ಮೆಟ್ರೋ ಸಿಬ್ಬಂದಿಯಿಂದಲೇ ಅಸಭ್ಯ ವರ್ತನೆ ತೋರಿರುವಂತಹ ಘಟನೆ ನಗರದ ಜಾಲಹಳ್ಳಿ ಮೆಟ್ರೋ ಪ್ಲ್ಯಾಟ್​ಫಾರ್ಮ್​ನಲ್ಲಿ ನಡೆದಿದೆ.

Ad Widget . Ad Widget .

ಈ ಕುರಿತಾಗಿ ಮೆಟ್ರೋ ಮೇಲಧಿಕಾರಿಗಳಿಗೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆದರೆ ಮೆಟ್ರೋ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಜಾಲಹಳ್ಳಿ ಮೆಟ್ರೋ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

Ad Widget . Ad Widget .

ಈಕೆಯ ದೂರಿನಲ್ಲಿ ನಾನು ಆತನನ್ನು ಪ್ರಶ್ನೆ ಮಾಡಿದೆ. ಆದರೆ ಆತ ಕೆಲವು ಸನ್ನೆಗಳನ್ನು ಮಾಡುವ ಮೂಲಕ ನನ್ನನ್ನು ನೋಡುತ್ತಲೇ ಇದ್ದ. ಹಾಗಾಗಿ ನಾನು ವಿಡಿಯೋ ಮಾಡಲು ಆರಂಭಿಸಿದ ಬಳಿಕ ಅವನು ಅಲ್ಲಿಂದ ಹೊರಟು ಹೋದ ಎಂದು ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ವಿಡಿಯೋದೊಂದಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೇಲ್​ ಮಾಡಿರುವ ಮಹಿಳೆ ‘ನಾನು ಇಲ್ಲಿ ಸುರಕ್ಷಿತಳಲ್ಲ ಎಂಬಂತೆ ಭಾಸವಾಗುತ್ತಿದೆ’ ಎಂದಿದ್ದಾರೆ. ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *