Ad Widget .

ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ| ಕ್ರೈಂ ಸೀನ್ ಪರಿಶೀಲನೆ ವೇಳೆ ಅನುಮಾನ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Ad Widget . Ad Widget .

ಬೆಂಗಳೂರಿನ ಜೆ‌.ಪಿ.ನಗರದ 3ನೇ ಹಂತದಲ್ಲಿ ಈ ದುರಂತ ನಡೆದಿದೆ. ಈ ಘಟನೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಸುಕನ್ಯಾ ಮಕ್ಕಳಾದ ನಿಖಿತ್, ನಿಶಿತ್ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಜೆ‌.ಪಿ.ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ.

Ad Widget . Ad Widget .

ಇವರು ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗಳು ಸಾಲ ವಾಪಾಸ್ ಕೇಳಿದ್ದರಂತೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸ್ಥಳಕ್ಕೆ ಎಫ್​ಎಸ್​ಎಲ್​​ ಸಿಬ್ಬಂದಿ ಮತ್ತು ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ರೈಂ ಸೀನ್ ಪರಿಶೀಲನೆ ವೇಳೆ ಅನುಮಾನ ವ್ಯಕ್ತವಾಗಿದೆ. ಪರಿಶೀಲನೆ ವೇಳೆ ಶವದ ಬಳಿ ವೈಯರ್ ಪತ್ತೆಯಾಗಿದೆ. ಎಲೆಕ್ಟ್ರಿಕಲ್ ವೈಯರ್ ಹಿಡಿದು ಮೃತಪಟ್ಟಿರುವ ಅನುಮಾನವು ಮೂಡಿದೆ.

Leave a Comment

Your email address will not be published. Required fields are marked *