Ad Widget .

ಮಾ.31ರಂದು ದೇಶಾದ್ಯಂತ ಬ್ಯಾಂಕ್ ರಜೆ ಕ್ಯಾನ್ಸಲ್| RBI ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಮಾರ್ಚ್ 31ರ ಭಾನುವಾರದಂದು ದೇಶಾದ್ಯಂತ ಬ್ಯಾಂಕ್’ಗಳನ್ನು ತೆರೆದಿಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿರ್ಧರಿಸಿದೆ.

Ad Widget . Ad Widget .

ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಟ್ವೀಟ್ ಮೂಲಕ ಆರ್ ಬಿಐ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ. ಮಾರ್ಚ್ 31, 2024 ಭಾನುವಾರವಾಗಿದ್ದರೂ, ಎಲ್ಲಾ ಬ್ಯಾಂಕುಗಳು ತೆರೆದಿರುತ್ತವೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ 2023-24ರ ಕೊನೆಯ ದಿನವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Ad Widget . Ad Widget .

ಈ ಹಿಂದೆ, ಆದಾಯ ತೆರಿಗೆ ಇಲಾಖೆ ತನ್ನ ಎಲ್ಲಾ ಕಚೇರಿಗಳನ್ನು ತೆರೆದಿಡಲು ನಿರ್ಧರಿಸಿತ್ತು. ಗುಡ್ ಫ್ರೈಡೆ ರಜೆ ಸೇರಿದಂತೆ ಶನಿವಾರ ಮತ್ತು ಭಾನುವಾರ ರಜಾದಿನಗಳನ್ನ ಇಲಾಖೆ ರದ್ದುಗೊಳಿಸಿತ್ತು.

Leave a Comment

Your email address will not be published. Required fields are marked *