Ad Widget .

ಐಸಿಸಿ ಟಿ-20 ರಾಂಕಿಂಗ್/ ಅಗ್ರಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್ ಯಾದವ್

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗqಗೊಳಿಸಿರುವ ಟ್ವೆಂಟಿ-20 ಬ್ಯಾಟಿಂಗ್ ರಾಂಕಿಂಗ್ ಪಟ್ಟಿಯಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಸೂರ್ಯಕುಮಾರ್ ಒಟ್ಟು 861 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಇಂಗ್ಲೆಂಡ್ ಫಿಲ್ ಸಾಲ್ಟ್ ಎರಡು ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಮೂರನೇ ಸ್ಥಾನದಲ್ಲಿದ್ದಾರೆ.

Ad Widget . Ad Widget .

ಭಾರತದ ಯುವ ಭರವಸೆಯ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ 714 ರೇಟಿಂಗ್ ಪಾಯಿಂಟ್ ಹೊಂದಿದ್ದು, 6ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಭಾರತದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ 660 ರೇಟಿಂಗ್ ಅಂಕಗಳೊಂದಿಗೆ ನಾಲ್ಕು ಮತ್ತು ರವಿ ಬಿಷ್ಟೋಯಿ (659) ಐದನೇ ಸ್ಥಾನದಲ್ಲಿದ್ದಾರೆ

Ad Widget . Ad Widget .

ಸೂರ್ಯಕುಮಾರ್ ಯಾದವ್, ಇನ್ನಷ್ಟೇ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಮೊದಲ ಪಂದ್ಯದಲ್ಲಿ ಆಡುವುದು ಅನುಮಾನವೆನಿಸಿದೆ.

Leave a Comment

Your email address will not be published. Required fields are marked *