ಬಂಟ್ವಾಳ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

Ad Widget ... ..

ಮೃತಪಟ್ಟ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಎಂದು ಗುರುತಿಸಲಾಗಿದೆ.

Ad Widget

ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ಯಾದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

Leave a Comment

Your email address will not be published. Required fields are marked *