Ad Widget .

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್‌ : ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುವೆಟ್ಟು‌ಗ್ರಾಮದ ಬೋಳ್ಮಿನಾರು, ಎಂಬಲ್ಲಿ ನಡೆದಿದೆ.

Ad Widget . Ad Widget .

ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದರು.

Ad Widget . Ad Widget .

ಸ್ಥಳದಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಸಿಕ್ಕಿದ ದಾಖಲೆಗಳ ಪ್ರಕಾರ ರಾಜು ಅವರ ಮನೆಯವರನ್ನು ಸ್ಥಳಕ್ಕೆ ಕರೆಯಿಸಿದ್ದು ಅಲ್ಲಿದ್ದ ಬ್ಯಾಗ್ ಹಾಗೂ ಆಧಾರ್ ಕಾರ್ಡ್ ಆಧಾರದಲ್ಲಿ ಮೃತಪಟ್ಟ ವ್ಯಕ್ತಿ ರಾಜು ಎಂದು ಮನೆಯವರು ಸ್ಪಷ್ಟಪಡಿಸಿದ್ದಾರೆ. ರಾಜು ಅವರು ಕೆಲವು ವರ್ಷಗಳ ಹಿಂದೆಯೇ ಮನೆ ಬಿಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ. ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಲಿರುವುದಾಗಿ‌ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *