ಉಳಿದ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್/ ನಾಳೆ ಘೋಷಣೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕರ್ನಾಟಕದ ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ (ಮಾ. 22) ಘೋಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Ad Widget ... ..

ಈಗಾಗಲೇ ಬಾಕಿ ಉಳಿದಿರುವ ಐದು ಕ್ಷೇತ್ರಗಳ ಕುರಿತು ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಸುದೀರ್ಘ ಚರ್ಚೆಯಾಗಿದೆ. ಮಾ.22ರಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ಕುರಿತು ಚರ್ಚೆ ಮಾಡಿ ಟಿಕೆಟ್ ಘೋಷಣೆ ಮಾಡಲಿದ್ದಾರೆ ಎಂದು ಅವರು ಹೇಳಿದರು.

Ad Widget

ಮೈತ್ರಿಯಿಂದಾಗಿ ಎನ್‍ಡಿಎ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅಮಿತ್ ಶಾ ಮತ್ತು ಮೋದಿ ಅವರ ಜತೆಗೆ ಸಂಪರ್ಕದಲ್ಲಿದ್ದಾರೆ. ಟಿಕೆಟ್ ಘೋಷಣೆ ಪೂರ್ಣಗೊಂಡ ಬಳಿಕ ರಾಜ್ಯಾದ್ಯಂತ ನಾವು ಪ್ರವಾಸ ಆರಂಭಿಸುತ್ತೇವೆ ಎಂದು ಮಾಹಿತಿ ನೀಡಿದರು.

Leave a Comment

Your email address will not be published. Required fields are marked *