Ad Widget .

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿಎಲ್ಎ, ಬೂತ್ ಅಧ್ಯಕ್ಷರಿಗೆ ತರಬೇತಿ ಕಾರ್ಯಾಗಾರ

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾ.14ರಂದು ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ನ ಬಿಎಲ್ಎ ಗಳಿಗೆ ಹೊಸ ಮತದಾರರ ಪಟ್ಟಿಯ ಸೇರ್ಪಡೆ ಹಾಗೂ ತಿದ್ದುಪಡಿಯ ತರಬೇತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರುಗಳಿಗೆ ಪಕ್ಷ ಸಂಘಟನೆಯ ತರಬೇತಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಯಶಸ್ವಿಯಾಗಿ ನಡೆಯಿತು.

Ad Widget . Ad Widget .

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರ ನಿರ್ದೇಶನದಂತೆ ಹಾಗೂ ಬಿಎಲ್ಎ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿಯವರ ಉಪಸ್ಥಿತಿಯಲ್ಲಿ ಮಹಮ್ಮದ್ ಬಡಗನ್ನೂರು ಕಾರ್ಯಾಗಾರವನ್ನು ನಡೆಸಿಕೊಟ್ಟರು.

Ad Widget . Ad Widget .

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ, ಗೇರು ಅಭಿವೃಧ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿಯವರಿಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿಯವರಿಗೆ, ಕಡಬ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಯವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಎಲ್ಲಾ ಘಟಕದ ಅಧಕ್ಷ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಕಾರ್ಯಕ್ರಮದಲ್ಲಿ ಕಿಸಾನ್ ಘಟಕದ ಅಧಕ್ಷ ಭವಾನಿಶಂಕರ್ ಗೌಡ, ಗೇರು ಅಭಿವೃಧ್ಧಿ ನಿಗಮದ ಅಧ್ಯಕ್ಷ ಮಮತಾ ಗಟ್ಟಿಯವರಿಗೆ ಗೇರು ಬೀಜದ ಮಾಲೆಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಸುಳ್ಯ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್, ಕೆಪಿಸಿಸಿ ಸಂಯೋಜಕ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜಿ. ಕೃಷ್ಣಪ್ಪ, ಕೆಪಿಸಿಸಿ ಸದಸ್ಯ ಸತೀಶ್ ಕೆಡೆಂಜಿ, ಡಿಸಿಸಿ ಉಪಾಧ್ಯಕ್ಷ ವಿಜಯ್ ಕುಮಾರ್ ರೈ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಸೈಮನ್, ಡಿಸಿಸಿ ಪದಾಧಿಕಾರಿ ವಿಜಯ್ ಕುಮಾರ್ ಸೊರಕೆ, ಮಾಜಿ ಅಧ್ಯಕ್ಷ ಶೀನಪ್ಪ, ಮಾಜಿ ಕೆಪಿಸಿಸಿ ಸದಸ್ಯ ಕೆ.ಪಿ.ತೋಮಸ್ಸ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಅಕ್ರಮ ಸಕ್ರಮ ಸಮಿತಿ ಸದಸ್ಯ ಪಿ.ಪಿ.ವರ್ಗೀಸ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ, ಅಕ್ರಮ ಸಕ್ರಮ ಸಮಿತಿ ಸದಸ್ಯ ಆದಂ, ಡಿಸಿಸಿ ಸದಸ್ಯ ಬಾಳಕೃಷ್ಣ ಬಳ್ಳೇರಿ, ಉಷಾ ಅಂಚನ್, ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪೈಜಲ್, ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಸತೀಶ್ ನಾಯಕ್ ಮೇಲಿನಮನೆ, ಪ್ರಚಾರ ಸಮಿತಿ ಅಧ್ಯಕ್ಷ ರಾಯ್ ಅಬ್ರಹಾಂ, ಸಂಘಟನಾ ಕಾರ್ಯದರ್ಶಿ ಶಿವರಾಮ್ ರೈ, ಯುವ ಕಾಂಗ್ರೆಸ್ ಸಮಿತಿಯ ಅಧಕ್ಷ ಅಭಿಲಾಷ್ ಪಿ.ಕೆ., ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದ ದಿನೇಶ್ ಬಿಳಿನೆಲೆ, ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷ ಅಶ್ರಪ್ ಶೇಡಿಗುಂಡಿ, ಕಿಸಾನ್ ಘಟಕದ ಅಧಕ್ಷ ಭವಾನಿಶಂಕರ್ ಗೌಡ, ಕಾರ್ಮಿಕ ಘಟಕದ ಅಧಕ್ಷ ಮ್ಯಾಥ್ಯು, ಓಬಿಸಿ ಘಟಕದ ಪೂವಪ್ಪ ಕರ್ಕೇರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮೇಲುಸ್ಥುವಾರಿ ಸಮಿತಿ ಸದಸ್ಯ ಲೋಲಾಕ್ಷ, ಸತೀಶ್ ಕೂಜುಗೋಡು, ಪವನ್ ಸುಬ್ರಹ್ಮಣ್ಯ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಮುಂಚೂಣಿ ಘಟಕಗಳ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಪಧಾದಿಕಾರಿಗಳು, ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರುಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಸಮಿತಿ ಅಧ್ಯಕ್ಷರು, ಬೂತ್ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ನಾಯಕ್ ಮೇಲಿನಮ ಕಾರ್ಯಕ್ರಮ ನಿರ್ವಹಣೆ ಮಾಡಿ, ಪಿ.ಪಿ.ವರ್ಗೀಸ್ ರವರು ಧನ್ಯವಾದ ಸಲ್ಲಿಸಿ, ಉಷಾ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *