ಲೋಕಸಭೆ ಚುನಾವಣೆ ಹಿನ್ನೆಲೆ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆಯನ್ನು ಮುಂದೂಡಲಾಗಿದೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿತ್ತು. ಅದರಂತೆ ಮೇ. 8ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.

. Ad Widget . Ad Widget

ಆದರೆ ಇದೀಗ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ಮೇ.8ಕ್ಕೆ ನಡೆಯಬೇಕಿದ್ದ ಎಲ್ಲ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷೆಯ ದಿನಾಂಕ‌ವನ್ನು ಪ್ರಾಧಿಕಾರದ ವೈಬ್‌ಸೈಟ್‌ನಲ್ಲಿ ಹೊರಡಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *