Ad Widget .

ಹೊಸಬರಿಗೆ ಟಿಕೆಟ್/ ಡಿ ಕೆ ಶಿವಕುಮಾರ್ ಹೇಳಿಕೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಟಿಕೆಟ್ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದು ಹೇಳಿದ್ದಾರೆ.

Ad Widget . Ad Widget .

ಕೇವಲ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ನೀಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಕೇಳಿದಾಗ ಉತ್ತರಿಸಿ, ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು’ ಎಂದರು.

Ad Widget . Ad Widget .

ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ಇಂದು ಸಂಜೆ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ಇಟ್ಟುಕೊಂಡಿದ್ದೇವೆ’ ಎಂದರು.

Leave a Comment

Your email address will not be published. Required fields are marked *