ಸಮಗ್ರ ನ್ಯೂಸ್: ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ವಿಮಾನದ ಕರ್ತವ್ಯದ ಸಮಯ ಮಿತಿಗಳು ಮತ್ತು ಸಿಬ್ಬಂದಿಯ ಆಯಾಸ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಗಾಗಿ ಏರ್ ಇಂಡಿಯಾಕ್ಕೆ 80 ಲಕ್ಷ ರೂ. ದಂಡ ವಿಧಿಸಿದೆ.
ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ಜನವರಿಯಲ್ಲಿ ಏರ್ ಇಂಡಿಯಾದ ಸ್ಪಾಟ್ ಆಡಿಟ್ ಅನ್ನು ನಡೆಸಿತ್ತು. ಆಗ ಸಂಗ್ರಹಿಸಲಾಗಿದ್ದ ಸಾಕ್ಷಾಧಾರಗಳು ಆಧಾರದ ಮೇಲೆ ದಂಡ ವಿಧಿಸಿದೆ. ಫೈಟ್ ಡ್ಯೂಟಿ ಟೈಮ್ ಲಿಮಿಟೇಷನ್ (ಎಫ್‍ಡಿಟಿಎಲ್) ಮತ್ತು ವಿಮಾನ ಸಿಬ್ಬಂದಿಯ ಆಯಾಸ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿರುವುದು ಸಾಬೀತಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಈ ಕಾರಣಗಳಿಂದಾಗಿ ಮಾರ್ಚ್ 1ರಂದು ಏರ್ ಇಂಡಿಯಾಕ್ಕೆ ಶೋಕಾಸ್ ನೋಟಿಸ್ ಕೂಡ ನೀಡಲಾಗಿತ್ತು