Ad Widget .

ಬೆಂಗಳೂರಿನ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ

ಸಮಗ್ರ ನ್ಯೂಸ್: ಇನ್ನೇನು ಲೋಕಸಭೆ ಚುನಾವಣೆಗೆ ಕೆಲವು ದಿನಗಳಷ್ಟೆ ಬಾಕಿ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಹಲವು ತಪಾಸಣೆಗಳನ್ನು ಮಾಡುತ್ತಿದ್ದಾರೆ.

Ad Widget . Ad Widget .

ಅದರಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ ಅಧಿಕಾರಿಗಳು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿದರು. 234 ಮನೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, 177 ರೌಡಿಗಳು ಮನೆಯಲ್ಲಿರಲಿಲ್ಲ. ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳಲ್ಲೂ ತಪಾಸಣೆ ನಡೆಸಲಾಗಿದೆ.

Ad Widget . Ad Widget .

ಬೆಂಗಳೂರಿನ ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ ದಕ್ಷಿಣ ವಲಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ರೌಡಿಶೀಟರ್ ಮ‌ನೆಗಳನ್ನು ಪೊಲೀಸರು ಜಾಲಾಡಿದ್ದಾರೆ. ಸುಬ್ರಹ್ಮಣ್ಯಪುರ ಉಪವಿಭಾಗದ ವ್ಯಾಪ್ತಿಯಲ್ಲಿ 125, ವಿವಿ ಪುರಂ ವ್ಯಾಪ್ತಿಯಲ್ಲಿ 76, ಜಯನಗರ ವ್ಯಾಪ್ತಿಯಲ್ಲಿ 33 ಮನೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

ರೌಡಿಶೀಟರ್‌ಗಳ ಮನೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವುದನ್ನು ಖಚಿತಪಡಿಸಿಕೊಳ್ಳಲು ಈ ತಪಾಸಣೆ ನಡೆಸಲಾಯಿತು. ಆದರೆ, ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ. ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಪೊಲೀಸರು ರೌಡಿಶೀಟರ್‌ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Leave a Comment

Your email address will not be published. Required fields are marked *