Ad Widget .

ಲೋಕಸಭಾ ಚುನಾವಣೆ/ ತಲಕಾವೇರಿಯಿಂದ ಪ್ರಚಾರ ಆರಂಭಿಸಿದ ಯುದುವೀರ್

ಸಮಗ್ರ ನ್ಯೂಸ್: ತಲಕಾವೇರಿಯಲ್ಲಿ ಮಾತೆ ಕಾವೇರಿಗೆ ಪೂಜೆ ಸಲ್ಲಿಸುವ ಮೂಲಕ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ತಮ್ಮ ಚುನಾವಣಾ ಪ್ರಚಾರ ಆರಂಭಿಸಿದರು. ಮೊದಲು ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದ ಅವರು, ಬಳಿಕ ಭಗಂಡೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Ad Widget . Ad Widget .

ಪೂಜೆಯ ಬಳಿಕ ಯದುವೀರ್ ಹಾಗೂ ಇತರರು ಚೇರಂಬಾಣೆ, ಸಂಪಾಜೆ, ಮೂರ್ನಾಡು ಸೇರಿದಂತೆ ವಿವಿಧೆಡೆಗಳಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು.

Ad Widget . Ad Widget .

ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದು, ಯದುವೀರ್ ಅವರ ಗೆಲುವಿಗಾಗಿ ಪ್ರಾರ್ಥಿಸಿದರು.

Leave a Comment

Your email address will not be published. Required fields are marked *