ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ, ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಲೊ ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತಾನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭೂತಾನ್‍ನ ರಾಜ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಸ್ಥಾಪಿತವಾದ ಪ್ರಾಶಸ್ತ್ರದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಲೋ ಅನ್ನು ಜೀವಮಾನದ ಸಾಧನೆಗಾಗಿ ನೀಡಲಾಗುತ್ತಿತ್ತು. ಭೂತಾನ್‍ನ ಸರ್ವಶ್ರೇಷ್ಠ ಪ್ರಜೆಗೆ ಈ ಗೌರವವನ್ನು ನೀಡಲಾಗುತ್ತದೆ. ಇಲ್ಲಿಯವರೆಗೂ ಈ ಪ್ರಶಸ್ತಿಯನ್ನು ಕೇವಲ ನಾಲ್ಕು ಗಣ್ಯ ವ್ಯಕ್ತಿಗಳಿಗೆ ಮಾತ್ರ ನೀಡಲಾಗಿದೆ. ಭೂತಾನ್ ಅತ್ಯುನ್ನತ ನಾಗರಿಕ ಗೌರವವನ್ನು ಪಡೆದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥ ಪ್ರಧಾನಿ ಮೋದಿ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ಗೌರವವನ್ನು ರಾಯಲ್ ಕ್ಲೀನ್ ಅವರ ಅಜ್ಜಿ ಆಶಿ ಕೆಸಾಂಗ್ ಚೋಡೆನ್ ವಾಂಗ್‍ಚುಕ್ ಅವರಿಗೆ 208ರಲ್ಲಿ ನೀಡಲಾಗಿತ್ತು. ಆ ಬಳಿಕ, ಜೆ ತ್ರಿಜೂರ್ ಟೆಂಜಿನ್ ಡೆಂಡಪ್ (68 ನೇ ಭೂತಾನ್ ನ ಜೆ ಖೆನ್ನೋ) ಅವರಿಗೂ ಅದೇ ವರ್ಷದಲ್ಲಿ ನೀಡಲಾಗಿತ್ತು. 2018 ರಲ್ಲಿ ಅವರ ಜೆ ಖೆನ್ನೋ ಟ್ರುಲ್ಕು ನಾವಾಂಗ್ ಜಿನ್ಮ ಜೋಡ್ತಾ ಅವರಿಗೆ ನೀಡಲಾಗಿತ್ತು. ಜೆ ಖೆನ್ನೋ ಎನ್ನುವುದು ಭೂತಾನ್‍ನ ಕೇಂದ್ರ ಸಂನ್ಯಾಸಿಗಳ ಮುಖ್ಯ ಮಠಾಧೀಶರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮೋದಿ, “ಈ ಗೌರವ ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತ ಮತ್ತು 140 ಕೋಟಿ ಭಾರತೀಯರ ಗೌರವ. ಭೂತಾನ್‍ನ ಈ ಮಹಾನ್ ಭೂಮಿಯಲ್ಲಿರುವ ಎಲ್ಲಾ ಭಾರತೀಯರ ಪರವಾಗಿ ನಾನು ಈ ಗೌರವವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಮತ್ತು ಈ ಗೌರವಕ್ಕಾಗಿ ನನ್ನ ಹೃತ್ತೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ”ಎಂದಿದ್ದಾರೆ.
ಈ ಭೇಟಿಯು ಭಾರತ ಮತ್ತು ಭೂತಾನ್ ನಡುವಿನ ನಿಯಮಿತ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯಕ್ಕೆ ಅನುಗುಣವಾಗಿದ್ದು, ನೆರೆಹೊರೆಯ ಮೊದಲ ನೀತಿಗೆ ಸರ್ಕಾರವು ಒತ್ತು ನೀಡುತ್ತದೆ. ಪಾರೋ ವಿಮಾನ ನಿಲ್ದಾಣದಲ್ಲಿ ಪ್ರಧಾನ ಮಂತ್ರಿ ತೈರಿಂಗ್ ಟೋಲ್ಲೇ ಅವರು ಪ್ರಧಾನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಭೇಟಿಯ ವೇಳೆ ಪ್ರಧಾನಿ ಮೋದಿ, ಪಿಎಂ ಟೊಲ್ಲೇ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.