ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ನಡೆಸುತ್ತಿರುವ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಹಲವು ಸುತ್ತಿನ ಕಾನೂನು ಸಮರದ ಬಳಿಕ ಪಬ್ಲಿಕ್ ಪರೀಕ್ಷೆ ಮುಂದುವರಿಸಲು ರಾಜ್ಯ ಹೈಕೋರ್ಟ್ ಶುಕ್ರವಾರ ಬೆಳಗ್ಗೆ ಗ್ರೀನ್ ಸಿಗ್ನಲ್ ನೀಡಿತ್ತು. ಇದೀಗ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ರುಪ್ಸಾ ಇದನ್ನು ಪ್ರಶ್ನಿಸಿ ಮತ್ತೆ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ. ಅದರ ನಡುವೆಯೇ ಹೈಕೋರ್ಟ್‌ಗೆ ಮಾಹಿತಿ ನೀಡಿರುವಂತೆಯೇ ಸೋಮವಾರದಿಂದ ಪರೀಕ್ಷೆ ಮುಂದುವರಿಸಲು ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ.
5, 8 ಮತ್ತು 9ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸೋಮವಾರದಿಂದಲೇ ನಡೆಸುವ ಬಗ್ಗೆ ಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ಈಗಾಗಲೇ ಐದನೇ ತರಗತಿ ನಾಲ್ಕು ವಿಷಯಗಳ ಪರೀಕ್ಷೆ ಮುಗಿದಿವೆ. 8 ಹಾಗೂ 9 ತಗರತಿಗಳ ಎರಡೆರಡು ವಿಷಯಗಳ ಪರೀಕ್ಷೆ ನಡೆದಿವೆ. 11ನೇ ತರಗತಿ ಎಲ್ಲಾ ವಿಷಯಗಳ ಪರೀಕ್ಷೆ ಮುಕ್ತಾಯವಾಗಿದೆ.
ಉಳಿದ ಪರೀಕ್ಷೆಗಳಿಗೆ ಸಂಬಂಧಿಸಿದ ವೇಳಾಪಟ್ಟಿ ಇಲ್ಲಿದೆ.
5ನೇ ತರಗತಿ ವೇಳಾಪಟ್ಟಿ:
25-03-2024- ಪರಿಸರ ಅಧ್ಯಯನ
26-03-2024- ಗಣಿತ
8ನೇ ತರಗತಿ ವೇಳಾಪಟ್ಟಿ:
25-03-2024- ತೃತೀಯ ಭಾಷೆ
26-03-2024- ಗಣಿತ
27-03-2024- ವಿಜ್ಞಾನ
28-03-2024- ಸಮಾಜ ವಿಜ್ಞಾನ
9ನೇ ತರಗತಿ ವೇಳಾಪಟ್ಟಿ:
25-03-2024- ತೃತೀಯ ಭಾಷೆ
26-03-2024- ಗಣಿತ
27-03-2024- ವಿಜ್ಞಾನ
28-03-2024- ಸಮಾಜ ವಿಜ್ಞಾನ