ಸಮಗ್ರ ನ್ಯೂಸ್: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‍ರನ್ನು ಅಕ್ರಮ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಒಂಬತ್ತು ಬಾರಿ ಇಡಿ ಸಮನ್ಸ್ ಕೊಟ್ಟಿದ್ದರೂ ವಿಚಾರಣೆಗೆ ಗೈರಾಗಿದ್ದ ಕೇಜ್ರಿವಾಲ್, ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆಧರೆ ಅಲ್ಲಿ ಕೇಜ್ರಿವಾಲ್ ಮನವಿ ತಿರಸ್ಕಾರವಾಗಿತ್ತು.
ಇಡಿ ಅಧಿಕಾರಿಗಳು ದೆಹಲಿ ಸಿಎಂ ನಿವಾಸಕ್ಕೆ ತೆರಳಿ ಎರಡು ಗಂಟೆಗಳಿಗೂ ಹೆಚ್ಚು ಸಮಯ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಿದ್ದರು. ಇದರೊಂದಿಗೆ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಒಟ್ಟು ಐವರನ್ನು ಅರೆಸ್ಟ್ ಮಾಡಿದಂತಾಗಿದೆ.
ಅರವಿಂದ್ ಕೇಜ್ರಿವಾಲ್ ಸ್ವತಂತ್ರ ಭಾರತದ ಇತಿಹಾಸದಲ್ಲಿ ಬಂಧನಕ್ಕೊಳಗಾದ ಮೊದಲ ಸೇವೆ ಸಲ್ಲಿಸುತ್ತಿರುವ ಮುಖ್ಯಮಂತ್ರಿಯಾಗಿದ್ದಾರೆ.