Ad Widget .

ಕಾರ್ಕಳ: ಟೆಂಪೋ ಪಲ್ಟಿ- ಓರ್ವ ಮೃತ್ಯು, ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್:‌ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್‌ನಲ್ಲಿ ನಡೆದಿದೆ.

Ad Widget . Ad Widget .

ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ವೇಳೆ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Ad Widget . Ad Widget .

ಪರಿಣಾಮವಾಗಿ ಐವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಮೃತಪಟ್ಟಿರುತ್ತಾರೆ.ಟೆಂಪೋದಲ್ಲಿ ಚಾಲಕ ಸೇರಿದಂತೆ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *