ಪಬ್ಲಿಕ್ ಪರೀಕ್ಷೆಗೆ ಮತ್ತೆ ಕಂಟಕ ಎದುರಾಗುವ ಸಾಧ್ಯತೆ/ ಸುಪ್ರೀಂ ಮೆಟ್ಟಿಲೇರಲು ರುಪ್ಸಾ ನಿರ್ಧಾರ

ಸಮಗ್ರ ನ್ಯೂಸ್: 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಮತ್ತೆ ಸಮಸ್ಯೆ ಎದುರಾಗುವ ಸಾಧ್ಯತೆ ಕಾಣುತ್ತಿದೆ. ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಆದರೆ ಈ ಆದೇಶದ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರುಪ್ಸಾ) ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ. ಹೀಗಾಗಿ ಮತ್ತೆ ಸುಪ್ರೀಂಕೋರ್ಟ್ ನಿರ್ಧಾರದ ಮೇಲೆ ಪರೀಕ್ಷೆ ಭವಿಷ್ಯ ನಿಂತಿದೆ.

Ad Widget ... ..

ನ್ಯಾ. ಸೋಮಶೇಖರ್ ಹಾಗೂ ನ್ಯಾ. ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಪಬ್ಲಿಕ್ ಪರೀಕ್ಷೆಗೆ ಅನುಮತಿ ನೀಡಿ, ಸೋಮವಾರದಿಂದ ಪರೀಕ್ಷೆ ಮರು ಆರಂಭಕ್ಕೆ ಕ್ರಮ ತೆಗೆದುಕೊಳ್ಳುವುದಾಗಿ ಸರ್ಕಾರ ಕೋರ್ಟ್‍ಗೆ ಹೇಳಿತ್ತು.

Ad Widget

5, 8 ಮತ್ತು 9ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸೋಮವಾರದಿಂದಲೇ ನಡೆಸುವ ಬಗ್ಗೆ ಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ಈಗಾಗಲೇ ಐದನೇ ತರಗತಿ ನಾಲ್ಕು ವಿಷಯಗಳ ಪರೀಕ್ಷೆ ಮುಗಿದಿವೆ. 8 ಹಾಗೂ 9 ತಗರತಿಗಳ ಎರಡೆರಡು ವಿಷಯಗಳ ಪರೀಕ್ಷೆ ನಡೆದಿವೆ. 11ನೇ ತರಗತಿ ಎಲ್ಲಾ ವಿಷಯಗಳ ಪರೀಕ್ಷೆ ಮುಕ್ತಾಯವಾಗಿದೆ.
ಈ ನಡುವೆ, ಹೈಕೋರ್ಟ್ ವಿಭಾಗೀಯ ಪೀಠದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ.

Leave a Comment

Your email address will not be published. Required fields are marked *