Ad Widget .

ಬೆಳ್ತಂಗಡಿ: ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ| ಮದ್ಯ ಸಹಿತ ಆರೋಪಿ ವಶ

ಸಮಗ್ರ ನ್ಯೂಸ್:‌ ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ನಡೆಸಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಮಿನಂದೆಲ್ ನಿವಾಸಿ ಶೀನ ಗೌಡರ ಮಗ ದಯಾನಂದ ಗೌಡ (47) ಎಂದು ಗುರುತಿಸಲಾಗಿದೆ.

Ad Widget . Ad Widget .

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಿನಂದೆಲ್ ಬಾನಿ ಮೆನ್ಸ್ ಪಾರ್ಲರ್ ಹಿಂಭಾಗದಲ್ಲಿರುವ ಗೋಡೌನ್ ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಬಾರ್ ಅಥವಾ ವೈನ್ ಶಾಪ್ ನಿಂದ ಖರೀದಿಸಿ ಅಕ್ರಮವಾಗಿ ಮದ್ಯ ಶೇಖರಿಸಿಟ್ಟದ್ದ ಬಗ್ಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳಕ್ಕೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿಯನ್ನು ನಡೆಸಿದ್ದಾರೆ.

ದಾಳಿಯ ವೇಳೆ ಸ್ಥಳದಲ್ಲಿದ್ದ ಅಕ್ರಮ ಮದ್ಯ 67.950 ಲೀಟರ್ ಮತ್ತು 68.680 ಲೀಟರ್ ಬಿಯರ್ ವಶಕ್ಕೆ ಪಡೆದುಕೊಂಡಿದ್ದು ಇದರ ಮೌಲ್ಯ ಸುಮಾರು 45,000 ರೂಪಾಯಿ ಅಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಬೆಳ್ತಂಗಡಿ ಅಬಕಾರಿ ದಳ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳದ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ಚುನಾವಣೆಯ ನಿಮಿತ್ತ ಅಧಿಕಾರಿಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಇಂತಹ ಅಕ್ರಮಗಳಿಗೆ ಕಡಿವಾಣ ಬೀಳುವ ಸಾಧ್ಯತೆಯಿದೆ.

Leave a Comment

Your email address will not be published. Required fields are marked *