ಬಂಟ್ವಾಳ : ಅಕ್ರಮ ಮರಳು ಸಾಗಾಟ|ನಾಲ್ವರ ಅರೆಸ್ಟ್‌

ಸಮಗ್ರ ನ್ಯೂಸ್‌ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೊಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಇತ್ತೀಚೆಗೆ ನಡೆದಿದೆ.

Ad Widget ... ..

ಕನ್ಯಾನ ನಿವಾಸಿ ಅಬ್ದುಲ್ ರಹಮಾನ್‌ (೨೧),ಅಡ್ಯಾರು ನಿವಾಸಿ ಮಹಮ್ಮದ್ ಸಾದಿಕ್ , ಕಂಬಳಬೆಟ್ಟು ನಿವಾಸಿ ಗೌತಮ್(೨೧), ಕೆಲಿಂಜ ನಿವಾಸಿ ಗುಡ್ಡಪ್ಪ ಗೌಡ ಎಂಬವರು ಆರೋಪಿಗಳಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget

ನರಿಕೊಂಬು ಗ್ರಾಮದ ನೆಹರೂ ನಗರ ಎಂಬಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದ ವೇಳೆ ವಳಚ್ಚಿಲ್‌ ನೇತ್ರಾವತಿ ನದಿ ಕಿನಾರೆಯಿಂದ ಆರೋಪಿಗಳ ಪರವಾನಿಗೆ ಇಲ್ಲದೆ ಮರಳು ಸಾಗಾಟ ನಡೆಸುತ್ತಿರುವುದು ಗೊತ್ತಾಗಿದೆ. ಆರೋಪಿಗಳು ನೇತ್ರಾವತಿ ನದಿಯಿಂದ ಪರವಾನಿಗೆಯಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿ ಹಾಗೂ ಮರಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *