Ad Widget .

ಮಂಗಳೂರು: ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಬೇಡ ಎಂಬ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನದಲ್ಲಿ ಮತ್ತೆ ವ್ಯಾಪಾರ ಧರ್ಮ ದಂಗಲ್ ಕಂಡು ಬಂದಿದೆ. ಅನ್ಯಮತೀಯರಿಗೆ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘವು ದೇವಸ್ಥಾನದ ಆಡಳಿತ ಮಂಡಳಿಗೆ ಆಗ್ರಹಿಸಿದೆ. ಮುಲ್ಕಿಯಲ್ಲಿ ನಡೆಯಲಿರುವ ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂಬ ಕೂಗು ಕೇಳಿ ಬಂದಿದೆ.

Ad Widget . Ad Widget .

ಬಪ್ಪನಾಡುವಿನ ವ್ಯಾಪಾರ ಧರ್ಮ ದಂಗಲ್ ಕಳೆದ ವರ್ಷ ಬ್ಯಾನರ್ ಮೂಲಕ ಸದ್ದು ಮಾಡಿತ್ತು. ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಜಯರಾಮ್ ಶೆಟ್ಟಿಗಾರ್ ಎಂಬುವವರು ದೇವಸ್ಥಾನದ 150 ಮೀ ವ್ಯಾಪ್ತಿಯೊಳಗೆ ಅನ್ಯಮತೀಯ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಹಾಗೂ ದೇವಸ್ಥಾನದ ವಠಾರದಲ್ಲಿ ಹಿಂದುಗಳೇ ವ್ಯಾಪಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Ad Widget . Ad Widget .

ಬಪ್ಪ ಬ್ಯಾರಿ ಎಂಬ ಕೇರಳ ವ್ಯಾಪಾರಿಯು ದೇವಸ್ಥಾನವನ್ನು ಕಟ್ಟಿದರು ಎಂದು ಹೇಳಲಾಗುತ್ತೆ. ಇದು ದೇವಿಯ ಮಹಿಮೆಯನ್ನು ತಿಳಿಸುತ್ತದೆ. ಮುಲ್ಕಿ ನದಿಯ ಪ್ರವಾಹದಲ್ಲಿ ದೇವಸ್ಥಾನವು ನಶಿಸಿತು. ಆದರೆ 5 ಲಿಂಗಗಳ ಪೀಠಕ್ಕೆ ಯಾವುದೇ ಹಾನಿಯಾಗಿರಲಿಲ್ಲ. ಒಂದು ದಿನ ಬಪ್ಪ ಬ್ಯಾರಿ ಹಡಗು ಆ ಲಿಂಗಗಳಿಗೆ ಡಿಕ್ಕಿ ಹೊಡೆಯಿತು. ಆಗ ಅವನಿಗೆ ದುರ್ಗಾದೇವಿಯು ಕನಸಿನಲ್ಲಿ ಬಂದು ಆ ಲಿಂಗಗಳಿಗೆ ದೇವಸ್ಥಾನವನ್ನು ಕಟ್ಟಲು ಹೇಳಿದಂತಾಯಿತು. ಆದ್ದರಿಂದ ಈ ಸ್ಥಳವನ್ನು ಬಪ್ಪ ಎಂದು ಕರೆಯುತ್ತಾರೆ.

ಈ ವಿಷಯವನ್ನು ತಲೆಯಲ್ಲಿ ಇಟ್ಟುಕೊಂಡು ಬಪ್ಪ ಬ್ಯಾರಿ ಮನೆತನದವರು ಉತ್ಸವಗಳಲ್ಲಿ ಪ್ರಸಾದವನ್ನು ಹಂಚುತ್ತಾರೆ. ಈ ಮನೆತನದವರು ಹೂವು ಹಣ್ಣುಗಳನ್ನು ಅರ್ಪಿಸುತ್ತಾರೆ. ಆ 5 ಲಿಂಗಗಳು ಯಾವುವೆಂದರೆ ಮೂಲ ದುರ್ಗ, ಅಗ್ನಿ ದುರ್ಗ, ಜಲದುರ್ಗ, ವನದುರ್ಗ, ಆಗ್ರಾದುರ್ಗ ಇವೆಲ್ಲವುಗಳು ಒಂದೇ ಪಾಣಿಪೀಠದಲ್ಲಿ ಸ್ಥಾಪಿಸಿದ್ದಾರೆ. ಮುಖ್ಯವಾದ ಹಬ್ಬಗಳು ಯಾವುವೆಂದರೆ ಕಾರ್ತಿಕ ಪೂಜಾ ದೀಪೋತ್ಸವ, ಶರನ ನವರಾತ್ರಿ ಯುಗಾದಿ ಮತ್ತು ಶುಕ್ರವಾರ ವಿಶೇಷ ಪೂಜೆಗಳು ಜಾತ್ರೆಯು ಮಾರ್ಚ್-ಏಪ್ರಿಲ್‌ಗಳಲ್ಲಿ 9 ದಿನಗಳ ಕಾಲ ನಡೆಯುತ್ತದೆ.

ಇಲ್ಲಿ ನಡೆಯುವ ಜಾತ್ರೆಗೆ ಮತ, ಧರ್ಮವೀರಿ ಎಲ್ಲರೂ ಭಾಗವಹಿಸುತ್ತಾರೆ. ಆದರೆ ಕಳೆದ 2-3 ವರ್ಷಗಳಿಂದ ಇಲ್ಲಿ ಧರ್ಮ ದಂಗಲ್ ನಡೆಯುತ್ತಿದೆ.

Leave a Comment

Your email address will not be published. Required fields are marked *