Ad Widget .

ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆ

ಸಮಗ್ರ ನ್ಯೂಸ್: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆಯಾಗಿದ್ದು. ನಿನ್ನೆ ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಗೆ ಕಾರು ತಳ್ಳಿರುವ ಶಂಕೆ ವ್ಯಕ್ತವಾಗಿದೆ. ಇದು ದಕ್ಷಿಣ ಕನ್ನಡ ಮೂಲದ ರಫಿಕ್ ಎಂಬುವರಿಗೆ ಸೇರಿದ ಕಾರು ಎನ್ನಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್
ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ.

Ad Widget . Ad Widget .

ತುಮಕೂರು ಎಸ್ ಪಿ ಅಶೋಕ್ ಕೆ.ವಿ, ಘಟನೆ ಕುರಿತು ಮಾಹಿತಿ ನೀಡಿದ್ದು, ಇವತ್ತು ಮಧ್ಯಾಹ್ನ 1 ಗಂಟೆಗೆ ನಮಗೆ ಮಾಹಿತಿ ಬಂದಿದೆ. ತುಮಕೂರು ಗ್ರಾಮಾಂತರದ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕುಚ್ಚಂಗಿ ಕೆರೆಯ ಮಧ್ಯದಲ್ಲಿ ವೈಟ್ ಕಲರ್ ಮಾರುತಿ ಎಸ್ ಪ್ರೆಸ್ ಕಾರಿನಲ್ಲಿ ಮೂರು ಮೃತದೇಹಗಳು ಸುಟ್ಟು ಸ್ಥಿತಿಯಲ್ಲಿ ಸಿಕ್ಕಿವೆ. ಕೂಡಲೇ ನಮ್ಮ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗ ಎಫ್ಎಸ್ಎಲ್ ಟೀಂ ಬಂದಿದೆ, ತಪಾಸಣೆ ನಡಿತಿದೆ. ಕಾರಿನ ನಂಬರ್ ಬೇಸ್ ಮೇಲೆ ಕಾರು ಎಲ್ಲಿಂದ ಬಂತು, ಹೇಗೆ ಬಂತು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಈ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು. ಪ್ರಕರಣವನ್ನ ಆದಷ್ಟು ಬೇಗ ಪತ್ತೆ ಮಾಡುತ್ತೇವೆ ಎಂದರು

Ad Widget . Ad Widget .

Leave a Comment

Your email address will not be published. Required fields are marked *