ಸಮಗ್ರ ನ್ಯೂಸ್: ಸಕ್ಕರೆ ನಾಡು ಮಂಡ್ಯ ಜೆಡಿಎಸ್ ಪಾಲಾಗಿದ್ದು, ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾಗೆ ಭಾರೀ ನಿರಾಸೆಯಾಗಿದೆ.. ಈ ಕುರಿತು ಬಿಜೆಪಿ ಸಭೆಯಲ್ಲಿ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಮಾಹಿತಿ ನೀಡಿದ್ದಾರೆ.
ಜೆಡಿಎಸ್ ಕ್ಷೇತ್ರಗಳನ್ನು ಕೊನೆಗೂ ಬಿಜೆಪಿ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಕುರಿತು, ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಮಂಡ್ಯ, ಕೋಲಾರ, ಹಾಸನ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೇವೆ. ಇಂದು ರಾತ್ರಿ ಅಥವಾ ನಾಳೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಸುಮಲತಾ ಅಂಬರೀಶ್ ಬಿಜೆಪಿ ಬಿಗ್ ಶಾಕ್ ನೀಡಿದ್ದು, ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಮಂಡ್ಯ ಲೋಕಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್ ಗೆ ಬಿಗ್ ಶಾಕ್ ಎದುರಾಗಿದ್ದು, ಮುಂದೆ ಅವರು ಪಕ್ಷೇತರವಾಗಿ ಚುನಾವಣೆಗೆ ನಿಲ್ತಾರಾ ಅಥವಾ ಬೇರೆ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂಬುದು ಕಾದು ನೋಡಬೇಕು.