Ad Widget .

ವಿಟ್ಲ: ಅಂಗಡಿಗಳಿಗೆ ನುಗ್ಗಿ ನಗದು, ದಿನಸಿ ಕಳ್ಳತನ

ಸಮಗ್ರ ನ್ಯೂಸ್: ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ವಿಟ್ಲ ಪೇಟೆಯಲ್ಲಿ ಸಂಭವಿಸಿದೆ.

Ad Widget . Ad Widget .

ಮಹಮ್ಮದ್ ಹಾಜಿ ಮಾಲೀಕತ್ವದ ದಿನಸಿ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಹಾಗೂ ಮುಖ ಚಹರೆ ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಕಳ್ಳರು ಕೃತ್ಯ ಎಸಗಿರುವುದು ಕಾಣಿಸುತ್ತಿದೆ. ದಿನಸಿ ಅಂಗಡಿಯ ಹಿಂಭಾಗದಲ್ಲಿ ಛಾವಣಿಯ ಹಂಚು ತೆಗೆದು ಒಳ ನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ನಲ್ಲಿದ್ದ ರೂ 8000 ಮತ್ತು ಕಟ್ಟಿಟ್ಟಿದ್ದ ದಿನಸಿ ಸಾಮಾಗ್ರಿಯನ್ನು ಹೊತ್ತೊಯ್ದಿದ್ದಾರೆ.

Ad Widget . Ad Widget .

ಬಳಿಕ ಪಕ್ಕದ ದೀಪಕ್ ಬೀಡಿ ಕಂಟ್ರಾಕ್ಟರ್ ನಿಸಾರ್ ವಿ.ಎಸ್. ಅವರಿಗೆ ಸೇರಿದ ಬೀಡಿ ಬ್ರಾಂಚ್ ಹಿಬ್ಬಂದಿ ಬಾಗಿಲು ಮುರಿದು, ಒಳ ನುಗ್ಗಿದ್ದ ಕಳ್ಳರು, ಸಂಪೂರ್ಣ ಜಾಲಾಡಿ ಅಲ್ಲಿದ್ದ ಚಿಲ್ಲರೆ ಹಣವನ್ನು ಕದ್ದಿದ್ದಾರೆ. ಬಳಿಕ ಠಾಣೆಯಿಂದ ತುಸು ದೂರವಿರುವ ಮೇಗಿನ ಪೇಟೆಯಲ್ಲಿರುವ ಫೆಲಿಸ್ ಪಾಯಸ್ ಅವರಿಗೆ ಸೇರಿದ ಕೋಳಿಯ ಅಂಗಡಿಯ ಕಿಟಕಿ ಕಿತ್ತು ತೆಗೆದು ಒಳ ನುಗ್ಗಿದ ಕಳ್ಳರು, ಅಲ್ಲಿ ಕೂಡ ಒಂದಷ್ಟು ನಗದು ದೋಚಿದ್ದಾರೆ.

Leave a Comment

Your email address will not be published. Required fields are marked *