ಸಮಗ್ರ ನ್ಯೂಸ್: ಭೂತಾನ್ ಮತ್ತು ಭಾರತದ ನಡುವೆ ಇಂಧನ, ವ್ಯಾಪಾರ, ಡಿಜಿಟಲ್ ಸಂಪರ್ಕ, ಬಾಹ್ಯಾಕಾಶ ಮತ್ತು ಕೃಷಿ ಕ್ಷೇತ್ರಗಳ ನಡುವಿನ ವಿನಿಯಮದ ಒಪ್ಪಂದಕ್ಕೆ ಉಭಯ ದೇಶಗಳ ಪ್ರಧಾನಿಗಳು ಸಹಿ ಹಾಕಿದ್ದಾರೆ.
ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಭೂತಾನ್ ಮತ್ತು ಭಾರತದ ನಡುವೆ ರೈಲು ಸಂಪರ್ಕ ಸ್ಥಾಪಿಸುವ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿದ್ದು, ಈ ಮೂಲಕ ನೆರೆಯ ದೇಶಗಳ ನಡುವೆ ರೈಲು ಸಂಚಾರ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಬೆ ಅವರ ಉಪಸ್ಥಿತಿಯಲ್ಲಿ ಈ ತಿಳುವಳಿಕಾ ಒಡಂಬಡಿಕೆಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.
ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ನವೀಕರಿಸಬಹುದಾದ ಇಂಧನ, ಕೃಷಿ, ಯುವ ವಿನಿಮಯ, ಪರಿಸರ ಮತ್ತು ಅರಣ್ಯ ಮತ್ತು ಪ್ರವಾಸೋದ್ಯಮದಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ತಿಳುವಳಿಕೆ ರೂಪಿಸಿದ್ದಾರೆ.