ಸಮಗ್ರ ನ್ಯೂಸ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್( ಎಬಿವಿಪಿ) ದೆಹಲಿ ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಗೆದ್ದು ಬೀಗಿದೆ.
ಜೆಎನ್‍ಯು ವಿದ್ಯಾರ್ಥಿ ಘಟಕದ ಅಧ್ಯಕ್ಷ ಸ್ಥಾನ ಮತ್ತು ಇತರ ಮೂರು ಸ್ಥಾನಗಳನ್ನೂ ಎಬಿವಿಪಿ ಪಾಲಾಗಿದೆ. ಎಬಿವಿಪಿ ನಾಯಕ ಉಮೇಶ್ ಚಂದ್ರ ಜೆಎನ್‍ಯು ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೆನ್‍ಯು ವಿದ್ಯಾರ್ಥಿ ಘಟಕದ ಅಧ್ಯಕ್ಷನಾಗಿ ಉಮೇಶ್ ಚಂದ್ರ, ಉಪಾಧ್ಯಕ್ಷನಾಗಿ ಅವಿಜಿತ್ ಘೋಷ್, ಪ್ರಧಾನ ಕಾರ್ಯದರ್ಶಿಯಾಗಿ ಅರ್ಜುನ್ ಆನಂದ್ ಹಾಗೂ ಜಂಟಿ ಕಾರ್ಯದರ್ಶಿಯಾಗಿ ಗೋವಿಂದ್ ದಂಗಿ ಆಯ್ಕೆಯಾಗಿದ್ದಾರೆ.
ಕೋವಿಡ್ ಕಾರಣದಿಂದ ಕಳೆದ ನಾಲ್ಕು ವರ್ಷಗಳಿಂದ ಜೆನ್‍ಯುನಲ್ಲಿ ಚುನಾವಣೆ ನಡೆದಿರಿಲ್ಲ. ಸುದೀರ್ಘ ವರ್ಷಗಳ ಬಳಿಕ ನಡೆಯುತ್ತಿರುವ ಈ ಚುನಾವಣೆ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಎಡಪಂಥೀಯ ವಿದ್ಯಾರ್ಥಿ ಘಟಕಗಳಾದ ಆಲ್ ಇಂಡಿಯಾ ಸ್ಟುಡೆಂಟ್ ಆಸೋಸಿಯೇಶನ್, ಡೆಮಾಕ್ರಟಿಕ್ ಸ್ಟುಡೆಂಟ್ ಫೆಡರೇಶನ್, ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ, ಆಲ್ ಇಂಡಿಯಾ ಸ್ಟುಡೆಂಟ್ ಫೆಡರೇಶನ್, ವಿದ್ಯಾರ್ಥಿ ಸಂಘಟನೆಗಳು ಜಂಟಿಯಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವಿರುದ್ಧ ಸ್ಪರ್ಧಿಸಿತ್ತು.