ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಈರುಳ್ಳಿ ರಫ್ತನ ಮೇಲೆ ಹೇರಿರುವ ನಿರ್ಬಂಧವನ್ನು ಮುಂದಿನ ಆದೇಶದ ತನಕ ಅನಿರ್ದಿಷ್ಟಾವಧಿಗೆ ವಿಸ್ತರಿಸಿದ್ದು, ಭಾರತದ ಈ ಕ್ರಮದಿಂದಾಗಿ ಬಾಂಗ್ಲಾ, ಮಲೇಷಿಯಾ, ನೇಪಾಳ, ಯುಎಇ ಮೊದಲಾದ ರಾಷ್ಟ್ರಗಳಲ್ಲಿ ಈರುಳ್ಳಿ ದರ ಗಗನಕ್ಕೇರಿದೆ.
ಕೇಂದ್ರ ಸರ್ಕಾರವು ಈ ಹಿಂದೆ 2024ರ ಮಾ.31ರ ವರೆಗೆ ಈರುಳ್ಳಿ ರಫ್ತು ನಿರ್ಬಂಧಿಸುತ್ತಿರುವುದಾಗಿ ಹೇಳಿದ್ದು, ಇದೀಗ ನಿಷೇಧ ಇನ್ನಷ್ಟು ವಿಸ್ತರಣೆಯಾಗಿದೆ. ಈ ನಿರ್ಧಾರವು ದೇಶದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಈರುಳ್ಳಿ ದರದಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ನೆರವಾಗಲಿದೆ ಎನ್ನಲಾಗಿದೆ.