ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ನಾಳೆ (ಮಾರ್ಚ್ 25) ಬೆಳಗ್ಗೆ 8.30ರ ತನಕದ ಮಳೆ ಮುನ್ಸೂಚನೆ ಪ್ರಕಾರ, ರಾಜ್ಯದ ವಿವಿಧೆಡೆ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗಬಹುದು. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡಗಳಲ್ಲಿ, ಅದೇ ರೀತಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಚದುರಿದ ಸಾಧಾರಣ ಮಳೆ ಬೀಳಬಹುದು.
ಇಂದು (ಮಾರ್ಚ್ 24) ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಒಂದೆರಡು ಕಡೆ ಬೀಳಬಹುದು ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಎಚ್ಚರಿಕೆ ನೀಡಿದೆ.
ಬೆಂಗಳೂರು ಹವಾಮಾನ ಕೇಂದ್ರ ಶನಿವಾರ ಮಧ್ಯಾಹ್ನ ಪ್ರಕಟಿಸಿರುವ ಮಳೆ ಮುನ್ಸೂಚನೆ ವರದಿ ಪ್ರಕಾರ, ಮಾರ್ಚ್ 25ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಇನ್ನುಳಿದಂತೆ ಎಲ್ಲ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ.