Ad Widget .

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗುತ್ತೆ: ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಿದೆ. ಇದೀಗ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಕ್ಷೇತ್ರಗಳಿಗೆ ಯಾವುದೇ ಅಭ್ಯರ್ಥಿಗಳನ್ನು ಘೋಷಿಸದೆ ಪೆಂಡಿಂಗ್ ಉಳಿಸಿಕೊಂಡಿದೆ. ಇದೆ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟು ಆಗಿಲ್ಲ. ಎಳೆದಾಟವೂ ಆಗಿಲ್ಲ. ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತೆ. ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ. ಅವ್ರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ ಅದು ಸಾಧ್ಯನಾ? ಎಂದು ಮೈಸೂರಿನಲ್ಲಿ ಸಿಎಂ ಪ್ರಶ್ನೆ ಮಾಡಿದ್ದಾರೆ.

Ad Widget . Ad Widget .

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗುತ್ತೆ. ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ಅನಾನುಕೂಲ ಆಗಿದೆ. ಅದರಂತೆ ಇವರ ಮೈತ್ರಿಯೂ ಅನುಕೂಲ ಆಗಲ್ಲ. ಅವರ ಮೈತ್ರಿ ನಮಗೆ ಅನುಕೂಲ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ಬಿಜೆಪಿಯವರು 600 ಭರವಸೆಗಳಲ್ಲಿ ಶೇಕಡಾ 10% ಈಡೇರಿಸಿಲ್ಲ. ಮೋದಿಯವರು ಜನಕ್ಕೆ 15 ಲಕ್ಷ ಕೋಟ್ರಾ? ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುದ್ರಾ? ರೈತರ ಆದಾಯ ಡಬಲ್ ಮಾಡುದ್ರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹೇಳಿಕೆ ನೀಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *