ಮಂಗಳೂರು: ಅಕ್ರಮ ಗೋಸಾಗಾಟ- ಬಜರಂಗದಳ ಕಾರ್ಯಕರ್ತರಿಂದ ತಡೆ

ಸಮಗ್ರ ನ್ಯೂಸ್: ಕಾರಿನಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಸಂಘಟನೆಯ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಸ್ಥಳದಲ್ಲೇ ಬಿಟ್ಟು ತಂಡ ಪರಾರಿಯಾದ ಘಟನೆ ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ನಡೆದಿದೆ.

Ad Widget ... ..

ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದ್ದು ಅದರ ಕಾಲುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು. ಕಬಕದ ಬಜರಂಗದಳ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ.

Ad Widget

ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿಗಳು ಆಗಮಿಸಿ ನಾಲ್ಕು ಗೋವುಗಳನ್ನು ಮತ್ತು ಜಖಂಗೊಂಡ ವಾಹನವನ್ನು ಪುತ್ತೂರು ನಗರ ಠಾಣೆಗೆ ಸಾಗಿಸಿದ್ದಾರೆ. ಗೋವುಗಳಿಗೆ ನೀರು ಮೇವು ನೀಡಿ ಬಜರಂಗದಳದ ಕಾರ್ಯಕರ್ತರು ವ್ಯವಸ್ಥೆ ಮಾಡಿದ್ದಾರೆ.

Leave a Comment

Your email address will not be published. Required fields are marked *