Ad Widget .

ಜೈಲುಪಾಲಾದ ರೀಲ್ಸ್ ರಾಣಿ ಸೋನುಗೌಡ| 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ

ಸಮಗ್ರ ನ್ಯೂಸ್: ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ಇದೀಗ ಸೋನುಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

Ad Widget . Ad Widget .

ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಸೋನು ಗೌಡ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಸೋನು ಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

Ad Widget . Ad Widget .

ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು ಬ್ಯಾಡರಹಳ್ಳಿ ದೂರು ನೀಡಿದ ದೂರಿನ ಹಿನ್ನೆಲೆ ಅಂದ್ರಹಳ್ಳಿ ನಿವಾಸದಲ್ಲಿ ಸೋನುಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ಉತ್ತರ ಕರ್ನಾಟಕ ಮೂಲದ ಎಂಟು ವರ್ಷದ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಸೋನು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ್ದರು.

ಸೋನುಗೌಡ ಅವರು ಮಗುವನ್ನು ದತ್ತು ಪಡೆಯಲು ಅನುಸರಿಬೇಕಾದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಸರಿಯಾಗಿ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.ಈ ಹಿನ್ನೆಲೆ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಸೋನು ಗೌಡರನ್ನು ಬಂಧಿಸಲಾಗಿತ್ತು.

Leave a Comment

Your email address will not be published. Required fields are marked *