Ad Widget .

ಯಾದಗಿರಿ: SSLC ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಸಮಗ್ರ ನ್ಯೂಸ್: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಕ್ಕಳಿಗೆ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಿರುವ ಘಟನೆ ನಡೆದಿದೆ.

Ad Widget . Ad Widget .

ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಇವರಿಬ್ಬರನ್ನು ಅಮಾನತು ಮಾಡಿ ಯಾದಗಿರಿ ಜಿ.ಪಂ. ಸಿಇಒ ಗರೀಮಾ ಪನ್ವಾರ್ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರ ಅಮಾನತು ಮಾಡಲಾಗಿದೆ.

Leave a Comment

Your email address will not be published. Required fields are marked *